ಮೈಸೂರು ಜಂಬೂಸವಾರಿ: ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

Prasthutha|

ಮೈಸೂರು: ದಸರಾ ಜಂಬೂಸವಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮಾವುತರು ಹಾಗು ಕಾವಾಡಿಗರನ್ನು ಇಂದು ಸನ್ಮಾನಿಸಲಾಯಿತು.

- Advertisement -


ಈ ಮೂಲಕ ಅರಮನೆಯ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಆತ್ಮೀಯ ಬೀಳ್ಕೊಡುಗೆ ನೀಡಿತು.


ಕಳೆದ 56 ದಿನಗಳಿಂದ ಅರಮನೆ ಆವರಣದಲ್ಲಿ ಗಜಪಡೆ ಹಾಗೂ ಅದರೊಂದಿಗೆ ಬಂದಿದ್ದ ಮಾವುತರು, ಕಾವಾಡಿಗರ ಕುಟುಂಬದವರು ಬೀಡುಬಿಟ್ಟಿದ್ದರು. ಮಾವುತ, ಕಾವಾಡಿಗರಿಗೆ ಗೌರವ ಧನದ ಚೆಕ್ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp