ಮೈಸೂರು: ಮಹಿಷ ದಸರಾಕ್ಕೆ ಚಾಲನೆ

Prasthutha|

ಮೈಸೂರು: ಪುರಭವನದ ಆವರಣದಲ್ಲಿ ಮಹಿಷ ದಸರಾ ಕಾರ್ಯಕ್ರಮ ಪೊಲೀಸ್ ಭದ್ರತೆಯಲ್ಲಿ ಆರಂಭವಾಗಿದೆ.

- Advertisement -


ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ, ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುರಭವನದ ಆವರಣದಲ್ಲಿ ಮಾತ್ರ ಕಾರ್ಯಕ್ರಮಕ್ಕೆ ಪೊಲೀಸರು ಅವಕಾಶ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಂಗಲ ಗ್ರಾಮದ ಸಮಾನ ಮನಸ್ಕ ಒಕ್ಕೂಟದ ಸದಸ್ಯರು ಇಂದು ಬೆಳಗ್ಗೆ ಮಹಿಷನಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರಲ್ಲದೆ ಮೈಸೂರಿಗೆ ತೆರಳಿ ಅಲ್ಲೂ ಮಹಿಷಾಸುರನಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಸಂಕಲ್ಪ ತೊಟ್ಟಿದ್ದಾರೆ.