ಮೈಸೂರು: ಮೌಲಾನಾ ಹಾಫಿಲ್ ಅಕ್ಮಲ್ ಅವರನ್ನು ಹತ್ಯೆ ಮಾಡಿರುವ ಘಟನೆ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ಸಂಜೆ ನಡೆದಿದೆ.
ಹತ್ಯೆಗೀಡಾದ ಅಕ್ಮಲ್ ಅವರು ಮಾಜಿ ಕಾರ್ಪೊರೇಟರ್ ಅಯಾಝ್ ಪಂಡು ಅವರ ಸಹೋದರ ಎಂದು ತಿಳಿದುಬಂದಿದೆ.
ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಇರುವ ಬೇಕರಿವೊಂದರ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಈ ಸಂಬಂಧ ಉದಯಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.