ಮೈಸೂರು ಮೇಯರ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ

Prasthutha|

ಮೈಸೂರು: ಮಹಾನಗರ ಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಮೇಯರ್-ಉಪಮೇಯರ್ ಎರಡೂ ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ.

- Advertisement -


ಸೋಮವಾರ ನಡೆದ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ರೇಷ್ಮಾ ಭಾನು ನಾಮಪತ್ರ ತಿರಸ್ಕೃತವಾದ್ದರಿಂದ ಬಿಜೆಪಿಗೆ ಮೇಯರ್-ಉಪಮೇಯರ್ ಎರಡೂ ಸ್ಥಾನ ದೊರೆತಿದೆ.
ನಾಲ್ಕನೇ ಅವಧಿಗೆ ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆಯಾದರೆ, ಬಿಜೆಪಿಯ ರೂಪ ಅವರು ಉಪಮೇಯರ್ ಆಗಿ ಆಯ್ಕೆಯಾದರು.


ರೇಷ್ಮಾ ಅವರು ಸಾಮಾನ್ಯ ಕ್ಷೇತ್ರದಿಂದ ಗೆದ್ದಿದ್ದಾರೆ. ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದೆ. ಆ ಜಾತಿ ಪ್ರಮಾಣಪತ್ರ ನೀಡದಿದ್ದರಿಂದ ನಾಮಪತ್ರವನ್ನು ಕ್ರಮಬದ್ಧವಾಗಿಲ್ಲ ಎಂದು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದ್ದಾರೆ. ಜೆಡಿಎಸ್ ಬಂಡಾಯ ಅಭ್ಯರ್ಥಿ ನಿರ್ಮಲಾ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಅವರು, 27 ಮತಗಳನ್ನು ಪಡೆದರು. ಬಿಜೆಪಿಯ ಜಿ.ರೂಪಾ 45 ಮತಗಳನ್ನು ಗಳಿಸಿ ಗೆಲುವು ಸಾಧಿಸಿದರು.

Join Whatsapp