ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದ ಮೈಸೂರು ಪೊಲೀಸ್ ಆಯುಕ್ತ

Prasthutha|

ಮೈಸೂರು: ಮಹಿಷ ದಸರಾಪರ-ವಿರೋಧ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಒಂದೆಡೆ ದಲಿತ ಸಮಿತಿಗಳು ಹಾಗೂ ಮಹಿಷ ದಸರಾ ಸಮಿತಿಯವರು ನಡೆಸಬೇಕು ಎಂದರೆ, ಇತ್ತ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿದ್ದರು.

- Advertisement -


ಇನ್ನು ಮಹಿಷ ದಸರಾ ಆಚರಣೆಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಷರತ್ತುಬದ್ಧ ಅನುಮತಿ ನೀಡಿದ್ದಾರೆ.ಆದರೆ, ವೇದಿಕೆ ಕಾರ್ಯಕ್ರಮಕ್ಕಷ್ಟೇ ಅವಕಾಶ ನೀಡಲಾಗಿದೆ. ಮೈಸೂರಿನಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆಗೆ, ಸಂಭ್ರಮಾಚರಣೆ  ನಿಷೇಧವಾಗಿದೆ. ಜೊತೆಗೆ ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ಭಾಷಣ ಮಾಡಬಾರದು ಹೀಗೆ ಇನ್ನಿತರ ನಿಬಂಧನೆಗಳನ್ವಯ ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದರು.