ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತ

Prasthutha|

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತವಾದ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ.

- Advertisement -


ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ಮೋದಿ (70), ಪ್ರಹ್ಲಾದ್ ಮೋದಿ ಪುತ್ರ ಮೆಹೂಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿಂದಾಲ್ ಮೋದಿ (35) ಹಾಗೂ ಮೊಮ್ಮಗ ಮಾಸ್ಟರ್ ಮೆಹತ್ ಮೆಹೋಲ್ ಮೋದಿ (06) ಹಾಗೂ ಕಾರು ಚಾಲಕ ಸತ್ಯನಾರಾಯಣ ಚಾಲಕ (46) ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

Join Whatsapp