►ಯದುವೀರ ಇಲ್ಲದ ಯೋಗ ದಿನವೇ ಬೇಡ ಎಂದ ಮೈಸೂರಿಗರು
ಮೈಸೂರು: ಜೂನ್ 21ರಂದು ಅರಮನೆ ಆವರಣದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ.
ಪ್ರಧಾನಿ ಮೋದಿ ಜೊತೆ ವೇದಿಕೆಯಲ್ಲಿ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶ ಇರಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ನೆಟ್ಟಿಗರು ಟ್ವೀಟರ್ ನಲ್ಲಿ ‘ನಮ್ಮ ಮೈಸೂರು, ನಮ್ಮ ಹೆಮ್ಮೆ ನಮ್ಮ ಮಹಾರಾಜರು’ ಹೆಸರಿನಲ್ಲಿ ಅಭಿಯಾನ ನಡೆಸುತ್ತಿದ್ದಾರೆ.
ಆಧುನಿಕ ಯೋಗ ಜಗದ್ವಿಖ್ಯಾತಿಯಾಗಲು ಮೈಸೂರು ಅರಸರ ಕೊಡುಗೆ ಇದೆ. ರಾಜವಂಶಸ್ಥರನ್ನು ಆಹ್ವಾನಿಸದಿರುವುದು ಸರಿಯಲ್ಲ, ನಮಗೆ ಯದುವೀರ ಅವರು ಇಲ್ಲದ ಯೋಗ ದಿನವೇ ಬೇಡ, ಮೈಸೂರಿನವರೇ ಇಲ್ಲದ ವೇದಿಕೆಯ ಕಾರ್ಯಕ್ರಮ ನಮಗೇಕೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.