Home ಟಾಪ್ ಸುದ್ದಿಗಳು ಮೈಸೂರು: 10ನೇ ಖಾಸಗಿ ದರ್ಬಾರ್ ನಡೆಸಿದ ಯದುವೀರ್

ಮೈಸೂರು: 10ನೇ ಖಾಸಗಿ ದರ್ಬಾರ್ ನಡೆಸಿದ ಯದುವೀರ್

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವೈಭವ ಮರುಕಳಿಸಿದ್ದು, ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನಖಚಿತ ಸಿಂಹಾಸನವೇರಿ 10ನೇ ಬಾರಿಗೆ ಖಾಸಗಿ ದರ್ಬಾರ್ ನಡೆಸಿದರು.


ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿಗೆ ಅಗ್ರಪೂಜೆಯೊಡನೆ ದಸರಾ ಹಬ್ಬಕ್ಕೆ ಚಾಲನೆ ದೊರೆತರೆ, ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್‌ನೊಂದಿಗೆ ನವರಾತ್ರಿ ಆಚರಣೆ ಚಾಲನೆ ಪಡೆದುಕೊಂಡಿತು. ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದರಾದ ಬಳಿಕ ಮೊದಲ ಬಾರಿಗೆ ದರ್ಬಾರ್ ಹಾಲ್‌ನಲ್ಲಿ ರತ್ನಖಚಿತ ಸಿಂಹಾಸನವೇರಿ ದರ್ಬಾರ್ ನಡೆಸಿದರು.


ಈ ಮೂಲಕ ಮೊದಲ ದಿನದ ಅರಮನೆ ಕಾರ್ಯಕ್ರಮ ಮುಕ್ತಾಯ ಗೊಂಡಿತು. ಪ್ರಮೋದಾದೇವಿ ಒಡೆಯರ್ ಮಾರ್ಗದರ್ಶನದಲ್ಲಿ, ಅ.11ರವರೆಗೆ ಖಾಸಗಿ ದರ್ಬಾರ್ ನಡೆಯಲಿದೆ. 12ರಂದು ವಿಜಯಯಾತ್ರೆ ಯದುವೀರ ನಡೆಸಲಿದ್ದಾರೆ.

Join Whatsapp
Exit mobile version