ನ್ಯಾ. ಬಿ.ಎಸ್. ಪಾಟೀಲ್ ನೂತನ ಲೋಕಾಯುಕ್ತರಾಗಿ ನೇಮಕ

Prasthutha|

ಬೆಂಗಳೂರು: ನ್ಯಾ. ಬಿ.ಎಸ್. ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಳಿಸಿ ರಾಜ್ಯಪಾಲ ಥಾಮರಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

- Advertisement -

ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾ. ಪಿ ವಿಶ್ವನಾಥ್ ಶೆಟ್ಟಿ 2022 27 ರಂದು ನಿವೃತ್ತಿಯಾಗಿದ್ದು, ಈ ಹುದ್ದೆ ತೆರವಾಗಿತ್ತು. ಸದ್ಯ ಈ ಹುದ್ದೆಗೆ ಬಿ.ಎಸ್. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 2019 ರಿಂದ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಬಿ.ಎಸ್. ಪಾಟೀಲ್ ಅವರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಇದರನ್ವಯ ರಾಜ್ಯಪಾಲರು ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.



Join Whatsapp