AFSPA ಕಾಯ್ದೆ ರದ್ದುಗೊಳಿಸಲು ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Prasthutha|

ಕೋಹಿಮಾ: ಕೇಂದ್ರ ಸರ್ಕಾರ ನಾಗಾಲ್ಯಾಂಡ್ ನಲ್ಲಿ ಹೇರಿರುವ ಕರಾಳ AFSPA ಕಾಯ್ದೆಯನ್ನು ರದ್ದುಗೊಳಿಸಲು ಒತ್ತಾಯಿಸಿ ನಿರ್ಣಯವನ್ನು ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ, ಕಳೆದ 20 ವರ್ಷಗಳಿಂದ ರಾಜ್ಯ ಸರ್ಕಾರ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (AFSPA) ಅನ್ನು ರದ್ದುಗೊಳಿಸಲು ಶಿಫಾರಸು ಮಾಡುತ್ತಿದೆ ಮತ್ತು ನಾಗಾಲ್ಯಾಂಡ್ ಅನ್ನು ಸೂಕ್ಷ್ಮ ಪ್ರದೇಶಗಳ ಪಟ್ಟಿಯಿಂದ ತೆಗೆದು ಹಾಕಲು ಶಿಫಾರಸು ಮಾಡಲಾಗಿತ್ತು ಅವರು ತಿಳಿಸಿದರು.

ಸದ್ಯ ನಾಗಾಲ್ಯಾಂಡ್ ನಲ್ಲಿ ಬಿಜೆಪಿಯ ಮಿತ್ರಪಕ್ಷವಾದ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ.

- Advertisement -

ನಾಗಾಲ್ಯಾಂಡ್ನ ಮೋನ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು 14 ನಾಗರಿಕರನ್ನು ಕೊಂದ ವಾರಗಳ ನಂತರ ಈ ನಿರ್ಣಯವನ್ನು ಅಂಗೀಕರಿಸಲಾಯಿತು. ಮೋನ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಗಳ ಕ್ಷಮೆಯಾಚನೆ ಮತ್ತು ನ್ಯಾಯ ಒದಗಿಸುವಂತೆ ನಿರ್ಣಯದಲ್ಲಿ ಒತ್ತಾಯಿಸಲಾಯಿತು.

ಕರಾಳ AFSPA ಕಾಯ್ದೆ ನಾಗಾಲ್ಯಾಂಡ್, ಮಣಿಪುರ, ಅಸ್ಸಾಮ್, ಅರುಣಾಚಲ ಪ್ರದೇಶ ಮತ್ತು ಜಮ್ಮು, ಕಾಶ್ಮೀರ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಜಾರಿಯಲ್ಲಿದೆ.

Join Whatsapp