ನಾಗಾಲ್ಯಾಂಡ್ ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ

Prasthutha|

ದಿಮಾಪುರ: ನಾಗಾಲ್ಯಾಂಡ್ ನಲ್ಲಿ ಭಾರೀ ಮಳೆಗೆ ಚುಮೌಕೆಡಿಮಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-29ರ ಒಂದು ಭಾಗ ಸಂಪೂರ್ಣ ಕುಸಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.

- Advertisement -


ಕೊಹಿಮಾದಾ ನ್ಯೂ ಚುಮೌಕೆಡಿಮಾ ಮತ್ತು ಫೆರಿಮಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ.


ಭೂಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿದ್ದ ಆರು ಮೃತದೇಹಗಳನ್ನು ರಾಜ್ಯ ವಿಪತ್ತು ಪಡೆ ಹೊರತೆಗೆದಿದೆ. ಇನ್ನು ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಅಲ್ಲದೇ ಭೂ ಕುಸಿತದಿಂದ ಅನೇಕರು ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆಎಸ್ ಡಿಆರ್ ಎಫ್ ತಂಡದಿಂದ ಶೋಧಕಾರ್ಯ ಮುಂದುವರೆದಿದ್ದು, ಸ್ಥಳೀಯರು ಕೂಡ ಇವರೊಂದಿಗೆ ಕೈಜೋಡಿಸಿದ್ದಾರೆ. ರಾತ್ರೋರಾತ್ರಿ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದ್ದು, ದಿಮಾಪುರ ಮತ್ತು ನಾಗಾಲ್ಯಾಂಡ್ ರಾಜಧಾನಿ ಕೊಹಿಮಾ ನಡುವೆ ಸಂಪರ್ಕ ಕಡಿತಗೊಂಡಿದೆ.



Join Whatsapp