ನಾಗಾಲ್ಯಾಂಡ್: ನಾಗರಿಕ ಹತ್ಯೆಗಳ ವಿರುದ್ಧ ರಾಜ್ಯಾದ್ಯಂತ ತೀವ್ರಗೊಂಡ ಪ್ರತಿಭಟನೆ

Prasthutha|

ನವದೆಹಲಿ: ನಾಗಾಲ್ಯಾಂಡ್ ನ ಮೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಬಲಿಯಾದ 14 ನಾಗರಿಕರ ಹತ್ಯೆಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದೆ. ನಾಗಾಲ್ಯಾಂಡ್ ನ ಪೂರ್ವ ಭಾಗದಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಕೋರಿ ಗುರುವಾರ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.

- Advertisement -

ಘಟನೆಗೆ ಸಂಬಂಧಿಸಿದಂತೆ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ENPO) ಸದಸ್ಯರು ಮೋನ್ ಜಿಲ್ಲೆಯಲ್ಲಿ ಒಂದು ದಿನದ ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ತುಯೆನ್ಸಾಂಗ್, ಲಾಂಗ್ಲೆಂಗ್, ಕಿಫಿರ್ ಮತ್ತು ನೋಕ್ಲಾಕ್ ಜಿಲ್ಲೆಗಳಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.

ಸೇನೆಯಿಂದ ಹತ್ಯೆಯಾದವರ ಕುಟುಂಬಗಳಿಗೆ ನ್ಯಾಯ ಒದಗಿಸುವವರೆಗೆ ನಾಗರಿಕರು ಭದ್ರತಾ ಪಡೆಗಳೊಂದಿಗೆ ಅಸಹಕಾರ ಘೋಷಿಸಿದ್ದಾರೆ.

- Advertisement -

ದಶಕದಷ್ಟು ಹಳೆಯದಾದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (AFSPA) ಅನ್ನು ಹಿಂಪಡೆಯಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.

Join Whatsapp