ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರು ಸಣ್ಣ ಮೀನು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಿಮಿಂಗಿಲಗಳು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ, ವಾಲ್ಮೀಕಿ ನಿಗಮ ಪ್ರಕರಣ ಎರಡರಲ್ಲೂ ಸಿಎಂ ಅಪರಾಧಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರದ್ದು ನೇರ ಹೊಣೆಗಾರಿಕೆ ಇದೆ ಎಂದು ಈ ಕಾರಣಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ನಂತರ ಮತ್ತೆ ಸಿಎಂ ಆಗಿ. ಆದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯಪಾಲರ ನೋಟಿಸ್ಗೆ ಸಿಎಂ ಸಿದ್ದರಾಮಯ್ಯ ಹೆದರಿದ್ದಾರೆ. ಅದಕ್ಕಾಗಿ ಸಂಪುಟ ಸಭೆ ಕರೆದು ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರ ರಾಜ್ಯಪಾಲರನ್ನು ಹೆದರಿಸುವ ಕೆಲಸಕ್ಕೆ ಕೈಹಾಕಿದೆ ಎಂದರು.