ಲೇಖಕ, ವಿಮರ್ಶಕ ಜಿ.ಹೆಚ್. ನಾಯಕ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

Prasthutha|

ಬೆಂಗಳೂರು: ಖ್ಯಾತ ಲೇಖಕರು ಮತ್ತು ವಿಮರ್ಶಕರಾದ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

- Advertisement -


ಕನ್ನಡದ ಲೇಖಕರು, ಸಾಹಿತ್ಯ ವಿಮರ್ಶೆ, ವಿಶ್ಲೇಷಣೆಗೆ ಹೆಸರುವಾಸಿಯಾಗಿದ್ದ ನಾಯಕ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಅವರೊಬ್ಬ ನಿಷ್ಠುರ ವಿಮರ್ಶಕರು, ಪ್ರಗತಿಪರ ಚಿಂತಕರಾಗಿದ್ದವರು. ಮೈಸೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿಅಪಾರ ಸೇವೆ ಸಲ್ಲಿಸಿದ್ದಾರೆ.
ಸಮಕಾಲೀನ ಅನೇಕ ವಿಮರ್ಶಾ ಕೃತಿಗಳು, ಸಾಹಿತ್ಯ ಕೃತಿಗಳನ್ನು ಸಂಪಾದಿಸಿದ ನಾಯಕ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅತ್ಯುತ್ತಮ ಸಾಹಿತ್ಯ ವಿಮರ್ಶೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.


ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಆಪ್ತರಿಗೆ ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.

Join Whatsapp