ವೇದಿಕೆಗಳಲ್ಲಿ ಕೊಳಕು ಭಾಷೆ ಬಳಸುವುದರಲ್ಲಿ ಬಿಜೆಪಿ ನಾಯಕರಿಗೆ ಪೈಪೋಟಿ ಇದ್ದಂತಿದೆ. ವಿವಾದಾತ್ಮಕ ಮತ್ತು ಪ್ರಚೋದನಕಾರಿ ಮಾತುಗಳಿಗೆ ಕುಖ್ಯಾತಿ ಪಡೆದಿರುವ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ತನ್ನ ನಾಲಗೆ ಹರಿಯಬಿಟ್ಟಿದ್ದು, ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ನಳಿನ್ ಕುಮಾರ್, “ರಾಹುಲ್ ಗಾಂಧಿ ಓರ್ವ ಡ್ರಗ್ ಪೆಡ್ಲರ್” ಎಂದು ಕೀಳು ಭಾಷೆಯಲ್ಲಿ ಮಾತನಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡುವೆ ಪೈಪೋಟಿ ಇದೆ, ರಾಹುಲ್ ಗಾಂಧಿಗೆ ಪಕ್ಷವನ್ನೇ ಮುನ್ನಡೆಸಲಾಗಿಲ್ಲ. ಇನ್ನು ಈ ದೇಶವನ್ನು ಅದು ಹೇಗೆ ಮುನ್ನಡೆಸುತ್ತಾರೆ ಎಂದೂ ಕೂಡಾ ಇದೇ ವೇಳೆ ಪ್ರಶ್ನಿಸಿದ್ದಾರೆ.