ಪುತ್ತೂರು| ನಳಿನ್, ಡಿವಿಎಸ್ ಫೋಟೋಗಳಿಗೆ ಶ್ರದ್ಧಾಂಜಲಿ: ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

Prasthutha|

ಪುತ್ತೂರು: ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ಗೆ ಚಪ್ಪಲಿಯ ಹಾರ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -


ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೇ 15 ಸಂಜೆ ನರಿಮೊಗರು ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ವೇಳೆ ಅವರೊಂದಿಗೆ ಇನ್ನೂ ಹಲವರಿದ್ದರು ಎಂಬ ಮಾಹಿತಿ ಮೇರೆಗೆ ಪತ್ತೆ ಕಾರ್ಯ ನಡೆಸಿದ ಪೊಲೀಸರು ತಡ ರಾತ್ರಿ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.


‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿತ್ತು.
ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ. ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.



Join Whatsapp