ಬಂಟ್ವಾಳ: ದಕ್ಷಿಣ ಕನ್ನಡ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ಅಭಿನಂದನಾ ಸಮಾರಂಭವೊಂದರಲ್ಲಿ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಕಟೀಲ್, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ. ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ ಎಂದರು. ಹಲವು ನೋವನ್ನ ಅನುಭವಿಸಿದ್ದೇನೆ. ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ ಎಂದರು.
ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ. ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಇನ್ನೂ ಉಳಿದಿರುವ ಆರು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆ. ಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದು ಅವರು ತಿಳಿಸಿದರು.