ಟಿಕೆಟ್ ಕೈತಪ್ಪುವ ಸುಳಿವು ಬೆನ್ನಲ್ಲೇ ಅಚ್ಚರಿಯ ಹೇಳಿಕೆ ನೀಡಿದ ನಳಿನ್ ಕುಮಾರ್ ಕಟೀಲ್

Prasthutha|

ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಅವರು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದು ಭಾವುಕರಾರದರು.

- Advertisement -


ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು.



Join Whatsapp