ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

Prasthutha|

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ.

- Advertisement -

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

Join Whatsapp