Home ಟಾಪ್ ಸುದ್ದಿಗಳು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಯು ಟರ್ನ್ ಹೊಡೆದ ನಳಿನ್ ಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಯು ಟರ್ನ್ ಹೊಡೆದ ನಳಿನ್ ಕುಮಾರ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಬಳ್ಳಾರಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೆ ಯು ಟರ್ನ್ ಹೊಡೆದಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮ ಪತ್ರ ರವಾನಿಸಿದ್ದೇನೆ ಎಂದು ಹೇಳಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ತರಾತುರಿಯಲ್ಲಿ ಸ್ಪಷ್ಟನೆ ನೀಡಿ ನಾನು ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.

Join Whatsapp
Exit mobile version