July 25, 2021

ವಿಶ್ವ ರೆಸ್ಲಿಂಗ್ ಪದಕವನ್ನು ಟೋಕಿಯೋ ಒಲಿಂಪಿಕ್ಸ್ ಪದಕವೆಂದ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್

ಏರೆಗ್ಲಾ ಪನೋಡ್ಚಿ ಎಂದು ಟ್ರೋಲ್ ಗೊಳಗಾದ ಮಂಗಳೂರು ಸಂಸದ

ಮಂಗಳೂರು : ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟರ್ ನಲ್ಲಿ ಯಡವಟ್ಟು ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೋಲ್ ಗೆ ಗುರಿಯಾಗಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಪ್ರಿಯಾ ಮಲ್ಲಿಕ್ ಅವರು ವರ್ಲ್ಡ್ ರೆಸ್ಲಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆಂದು ತಮ್ಮ ಟ್ವಿಟರ್ ನಲ್ಲಿ ಶುಭಾಶಯ ಕೋರಿರುವ ಟ್ವೀಟ್ ವೈರಲ್ ಆಗಿದೆ.

ನಳೀನ್ ಪೋಸ್ಟ್ ಗೆ 60 ಕ್ಕೂ ಅಧಿಕ ಲೈಕ್ಸ್ ಮತ್ತು ಕಾಮೆಂಟ್ಸ್ ಗಳು ಬಂದ್ದಿದ್ದು ಸುದ್ದಿ ಸುಳ್ಳು ಮಾಹಿತಿ ತಿಳಿದ ಬಳಿಕ 15 ನಿಮಿಷದಲ್ಲಿ ಟ್ವಿಟರ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇತ್ತೀಚ್ಚೆಗಷ್ಟೆ ಮುಖ್ಯಮಂತ್ರಿ ಬದಲಾವಣೆ ಕುರಿತು ತಮ್ಮ ಆಪ್ತರೊಂದಿಗೆ ನಡೆಸಿದ್ದಾರೆ ಎನ್ನಲಾದ ‘ಏರೆಗ್ಲಾ ಪನೋಡ್ಚಿ’ (ಯಾರಿಗೂ ಹೇಳಬೇಡ) ಎಂಬ ಆಡಿಯೋ ಕ್ಲಿಪ್ಪೊಂದು ಭಾರೀ ವೈರಲ್ ಆಗಿತ್ತು.

ಅದೇ ರೀತಿ ಸಂಸದ ತೇಜಸ್ವಿ ಸೂರ್ಯ ಕೂಡ ತಪ್ಪಾಗಿ ಟ್ವೀಟ್ ಮಾಡಿ ನಗೆಪಾಟಲಿಗೆ ಈಡಾಗಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!