ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳಿಗೆ ಪೊಲೀಸರಿಂದ ಚಿತ್ರಹಿಂಸೆ

Prasthutha|

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ.

- Advertisement -

ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದು, ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಲಾಗಿರುವ ಫೋಟೋಗಳನ್ನು ಹಂಚಲಾಗುತ್ತಿದೆ.

- Advertisement -

ಪುತ್ತೂರಿನಲ್ಲಿ ಬಿಜೆಪಿಯ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದ 9 ಮಂದಿಯನ್ನು ಪೊಲೀಸರು ಬಂಧಿಸಿದ್ದರು.

Join Whatsapp