ವಿಧಾನ ಪರಿಷತ್ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

Prasthutha|

- Advertisement -

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಸದ್ಯದಲ್ಲೇ ನಡೆಯಲಿದ್ದು, 2 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪ್ರಕಟಿಸಿದೆ.

ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ ಪಾಟೀಲ್ ಹೆಸರನ್ನು ಅಂತಿಮಗೊಳಿಸಲಾಗಿದೆ.

- Advertisement -

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪ್ರಕಟಣೆ ಮೂಲಕ ಈ ಮಾಹಿತಿ ತಿಳಿಸಿದ್ದಾರೆ.

Join Whatsapp