ಇಂದು ಬೆಂಗಳೂರಲ್ಲಿ ನಡೆಯಬೇಕಿದ್ದ ‘ನಮ್ಮ ಜಾತ್ರೆ’ ನಾಳೆಗೆ ಮುಂದೂಡಿಕೆ

Prasthutha|

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕರ್ನಾಟಕ ಸಂಭ್ರಮ -50’ರ ಅಂಗವಾಗಿ, ಅನ್ ಬಾಕ್ಸಿಂಗ್ ಬೆಂಗಳೂರು ಇದರ ಭಾಗವಾಗಿ ಆಯೋಜಿಸಿರುವ ನಮ್ಮ ಜಾತ್ರೆ ಜನಪದ ಸಂಭ್ರಮ ಇಂದು ನಡೆಸಲು ನಿಗದಿ ಪಡಿಸಲಾಗಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಬೇಕಿತ್ತು. ಆದರೆ ಹಿರಿಯ ನಟಿ ಲೀಲಾವತಿ ನಿಧನದ ಕಾರಣ ನಮ್ಮ ಜಾತ್ರೆ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

- Advertisement -

ಈ ಕುರಿತಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ,ಕರ್ನಾಟಕ ಸಂಭ್ರಮ -50ರ ಅಂಗವಾಗಿ, ಅನ್ ಬಾಕ್ಸಿಂಗ್ ಬೆಂಗಳೂರು ಇದರ ಭಾಗವಾಗಿ ಆಯೋಜಿಸಿರುವ ನಮ್ಮ ಜಾತ್ರೆ ಜನಪದ ಸಂಭ್ರಮ ವನ್ನು ರವಿವಾರಕ್ಕೆ ಮುಂದೂಡಲಾಗಿದೆ ಎಂದಿದ್ದಾರೆ.

ಹಿರಿಯ ಚಲನಚಿತ್ರ ಕಲಾವಿದೆ ಶ್ರೀಮತಿ ಲೀಲಾವತಿ ಅವರ ನಿಧನದಿಂದಾಗಿ ಅವರ ಗೌರವಾರ್ಥ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

ಅಂದಹಾಗೇ ನಾಳೆ ಬೆಳಿಗ್ಗೆ 9:30ಕ್ಕೆ ಭವ್ಯವಾದ ಮೆರವಣಿಗೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ಮೆರವಣಿಗೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ .ಶಿವಕುಮಾರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಉಪಸ್ಥಿತರಿರುತ್ತಾರೆ.

ನಂತರ ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರ ದಲ್ಲಿ ಜಾನಪದ ಕಲಾ ಪ್ರದರ್ಶನ, ಆಹಾರ ಮೇಳ, ಗುಡಿ ಮತ್ತು ಕುಶಲ ಕಲೆಗಾರಿಕೆಗಳ ಮಾರಾಟ ಮಳಿಗೆ ಹಾಗೂ ಪ್ರದರ್ಶನವನ್ನು ಕೂಡ ಸಿಎಂ ಸಿದ್ಧರಾಮಯ್ಯನವರು ಉದ್ಘಾಟಿಸುವರು.



Join Whatsapp