ಮೂರು ತಿಂಗಳ ನಂತರ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ

Prasthutha|

ಚಿಕ್ಕಬಳ್ಳಾಪುರ: ಬೆಂಗಳೂರಿಗರ ನೆಚ್ಚಿನ ಹಾಟ್ ಸ್ಪಾಟ್ ನಂದಿ ಬೆಟ್ಟಕ್ಕೆ, ಮೂರು ತಿಂಗಳ ನಂತರ ಬುಧವಾರದಿಂದ ಮತ್ತೆ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

- Advertisement -

ಗಿರಿಧಾಮಕ್ಕೆ ಪ್ರವೇಶಕ್ಕೆ ಪಾಸ್ ಕಡ್ಡಾಯವಾಗಿದ್ದು, ಮುಖ್ಯ ಪ್ರವೇಶದ್ವಾರದಲ್ಲಿ ತಪಾಸಣೆ ನಡೆಸಿ, ಪಾಸ್ ಹೊಂದಿರುವ ವಾಹನಗಳನ್ನು ಮಾತ್ರ ಮೇಲ್ಭಾಗಕ್ಕೆ ಬಿಡಲಾಗುತ್ತದೆ. ಆನ್’ಲೈನ್ ಹಾಗೂ ಆಫ್’ಲೈನ್ ವ್ಯವಸ್ಥೆಯಲ್ಲಿ ಪಾಸ್ ವಿತರಿಸಲಾಗುತ್ತಿದೆ. ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿರಬೇಕು. ವಾರಾಂತ್ಯಗಳಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಂದಿ ಬೆಟ್ಟ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಗಿರಿಧಾಮದಲ್ಲಿ ಹೋಟೆಲ್, ರೂಮ್ಗಳ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಶನಿವಾರ ಭಾನುವಾರ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಲತಾ. ಆರ್ ತಿಳಿಸಿದ್ದಾರೆ.

ಆಗಸ್ಟ್’ನಲ್ಲಿ ಸುರಿದ ಭಾರಿ ಮಳೆಗೆ ನಂದಿ ಬೆಟ್ಟದ ರಸ್ತೆ ಕುಸಿದು, ಸಂಚಾರ ಬಂದ್ ಆಗಿತ್ತು. ಇದೀಗ ಸುಮಾರು 80 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಕಾಂಕ್ರಿಟ್ ರಸ್ತೆ ನಿರ್ಮಾಣದ ಕಾಮಗಾರಿ ಮುಗಿದಿದೆ.

Join Whatsapp