ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Prasthutha|

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು, ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು, ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

- Advertisement -

ಭಾನುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲಿಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದರು.

Join Whatsapp