ಡಿಕೆಶಿ ವಿರುದ್ಧ ಜೆಡಿಎಸ್’ನಿಂದ ಕಣಕ್ಕಿಳಿದಿದ್ದ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: 2018ರ ಚುನಾವಣೆಯಲ್ಲಿ ಕನಕಪುರದಲ್ಲಿ ಡಿಕೆಶಿ ವಿರುದ್ಧವೇ ಜೆಡಿಎಸ್ನಿಂದ ಕಣಕ್ಕಿಳಿದಿದ್ದ ನಾರಾಯಣಗೌಡ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಭಾಕರ ರೆಡ್ಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -


ಗುರುವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.


ಪ್ರಭಾಕರ ರೆಡ್ಡಿ ಈ ಬಾರಿಯೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಜೆಡಿಎಸ್ನಿಂದ ಡಿಕೆಶಿ ಆಪ್ತೆ ಸುಷ್ಮಾ ರಾಜಗೋಪಾಲ್ ಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಪ್ರಭಾಕರ್ ಪಕ್ಷಾಂತರ ಮಾಡಿದ್ದಾರೆ ಎನ್ನಲಾಗಿದೆ.

Join Whatsapp