Home ಟಾಪ್ ಸುದ್ದಿಗಳು ಜೂನ್ 8ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸಾಧ್ಯತೆ

ಜೂನ್ 8ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸಾಧ್ಯತೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಜೂನ್ 8ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.


ಕೇಂದ್ರದಲ್ಲಿ ಸರಕಾರ ರಚನೆಗಾಗಿ ಎನ್ ಡಿಎ ಮೈತ್ರಿಕೂಟ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವೆ ಹಗ್ಗಜಗ್ಗಾಟ ಮುಂದುವರಿದಿರುವ ಬೆನ್ನಿಗೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಜೂನ್ 8ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಗಳಿಸುವ ಮೂಲಕ ಸರಳ ಬಹುಮತ ಪಡೆದಿದೆ. ಆದರೆ, ಎನ್ ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾದ ಬಿಜೆಪಿಯ ಸಂಖ್ಯಾಬಲ 303ರಿಂದ 240ಕ್ಕೆ ಕುಸಿತಗೊಂಡಿದ್ದು, ಇದರಿಂದ ಸ್ವಂತ ಬಲದಲ್ಲಿ ಸರಕಾರ ರಚಿಸುವುದು ಬಿಜೆಪಿ ಪಾಲಿಗೆ ಅಸಾಧ್ಯವಾಗಿ ಪರಿಣಮಿಸಿದೆ.

Join Whatsapp
Exit mobile version