ಮಹಾ ಎಡವಟ್ಟು : ಮೋದಿ, ಸೋನಿಯಾ ಹೆಸರು ಬಿಹಾರದಲ್ಲಿ ಕೋವಿಡ್ ಲಸಿಕೆ ಪಡೆದವರ ಪಟ್ಟಿಯಲ್ಲಿ ಸೇರ್ಪಡೆ!

Prasthutha|

ಅಮಿತ್ ಶಾ, ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್ ಹೆಸರೂ ಪತ್ತೆ!

- Advertisement -

ಪಾಟ್ನಾ: ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆದವರ ಪಟ್ಟಿಯಲ್ಲಿ ದೊಡ್ಡ ದೋಷ ಕಂಡುಬಂದಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಚಲನಚಿತ್ರ ತಾರೆಯರಾದ ಅಕ್ಷಯ್ ಕುಮಾರ್ ಮತ್ತು ಪ್ರಿಯಾಂಕಾ ಚೋಪ್ರಾ ಅವರ ಹೆಸರನ್ನು ಜಿಲ್ಲೆಯಲ್ಲಿ ಲಸಿಕೆ ಪಡೆದವರ ಪಟ್ಟಿಗೆ ಸೇರಿಸಲಾಗಿದೆ.

ಇವರೆಲ್ಲಾ ಜಿಲ್ಲೆಯ ಕರ್ಪಿ ಕಮ್ಯೂನಿಟಿ ಹೆಲ್ತ್ ಸೆಂಟರ್ ನಲ್ಲಿ ಲಸಿಕೆ ಪಡೆದಿರುವುದಾಗಿ ಉಲ್ಲೇಖಿಸಿರುವ ಪಟ್ಟಿಯನ್ನು ವ್ಯಾಕ್ಸಿನೇಶನ್ ಪೋರ್ಟಲ್‌ ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಡೇಟಾ ಎಂಟ್ರಿ ಉಸ್ತುವಾರಿ ವಹಿಸಿದ್ದ ಇಬ್ಬರು ಕಂಪ್ಯೂಟರ್ ಆಪರೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯ ಸರ್ಕಾರವು ತನಿಖೆ ನಡೆಸುವುದಾಗಿ ಘೋಷಿಸಿದೆ.

ಯಾರ ಅಣತಿಯಂತೆ ಈ ವಂಚನೆ ನಡೆಸಲಾಗಿದೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಎಸ್. ಪ್ರಿಯದರ್ಶಿನಿ ಮಾಹಿತಿ ಹೇಳಿದ್ದಾರೆ.

ಇದಕ್ಕೂ ಮುನ್ನ, ಎರಡನೇ ಡೋಸ್ ಲಸಿಕೆ ಪಡೆಯಲು ಕೇಂದ್ರಗಳಿಗೆ ಬಂದ ಜನರಿಗೆ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡ ದಾಖಲೆಯನ್ನು ಆರೋಗ್ಯ ಕಾರ್ಯಕರ್ತರು ತೋರಿಸಿದ್ದಾರೆ ಎಂಬ ದೂರು ಕೆಳಿ ಬಂದಿತ್ತು.

Join Whatsapp