ರಾಹುಲ್ ಗಾಂಧಿಯನ್ನು ಹತ್ಯೆಗೈಯ್ಯುವುದಾಗಿ ಬೆದರಿಕೆ: ಆರೋಪಿ ನರೇಂದ್ರ ಸಿಂಗ್ ಬಂಧನ

ಭೋಪಾಲ್: ಭಾರತ್ ಜೋಡೋ ಯಾತ್ರೆ ಇಂದೋರ್’ಗೆ ಬಂದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹತ್ಯೆಗೈಯ್ಯುವುದಾಗಿ ಬೆದರಿಕೆ ಹಾಕಿದ್ದ ದುಷ್ಕರ್ಮಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ದಯಾ ಅಲಿಯಾಸ್ ಪ್ಯಾರೆ ಅಲಿಯಾಸ್ ನರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಆತ ಉತ್ತರಪ್ರದೇಶದ ರಾಯ್ ಬರೇಲಿ ಮೂಲದವನು ಎಂಬುದು ಆತನ ಆಧಾರ್ ಕಾರ್ಡ್ ನಿಂದ ತಿಳಿದುಬಂದಿದೆ ಎಂದು ನಾಗ್ಡಾ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

- Advertisement -

ಆರೋಪಿ ಉಜ್ಜಯಿನಿ ಜಿಲ್ಲೆಯ ನಾಗ್ಡಾ ಪ್ರದೇಶದಲ್ಲಿದ್ದಾಗ ಆತನನ್ನು ಬಂಧಿಸಿ ಇಂದೋರ್ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಭಾರತ್ ಜೋಡೋ ಯಾತ್ರೆಗಾಗಿ ಇಂದೋರ್’ಗೆ ಆಗಮಿಸಿದ ಕೂಡಲೇ ರಾಹುಲ್ ಗಾಂಧಿ ಅವರ ಮೇಲೆ ಬಾಂಬ್ ದಾಳಿ ನಡೆಸಿ ಹತ್ಯೆಗೈಯ್ಯುವುದಾಗಿ ಈತ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಯಾತ್ರೆಗೆ ಭದ್ರತೆ ಹೆಚ್ಚಿಸಲಾಗಿತ್ತು.