ಯಾರೋ ಪಾಕ್‌ ಪರ ಘೋಷಣೆ ಕೂಗಿದ್ರೆ ನಾಸಿರ್ ಹೊಣೆ ಅಲ್ಲ: ಎಂ.ಬಿ.ಪಾಟೀಲ್

Prasthutha|

ವಿಜಯಪುರ: ಪಾಕ್‌ ಪರ ಘೋಷಣೆ ಕೂಗಿದ ಪ್ರಕರಣ ಮುಗಿಯುವವರೆಗೂ ನಾಸೀರ್‌ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ. ಯಾರೋ ಒಬ್ಬ ಘೋಷಣೆ ಕೂಗಿದ್ರೆ ನಾಸಿರ್ ಹುಸೇನ್‌ರನ್ನು ಜವಾಬ್ದಾರಿ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

- Advertisement -

ಪಾಕ್‌ ಪರ ಯಾರೇ ಘೋಷಣೆ ಕೂಗಲಿ, ಅದು ಘೋರ ಅಪರಾಧ ಎಂದ ಸಚಿವರು, ಘೋಷಣೆ ಯಾರು ಕೂಗಿದ್ದಾರೆ, ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಅದನ್ನು ಬಿಟ್ಟು ಇನ್ನೊಬ್ಬರನ್ನು ಹೊಣೆ ಮಾಡಲಾಗದು ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದಲ್ಲಿ ದಲಿತರು ಸಿಎಂ ಆಗಬೇಕು ಎಂಬ ಸಚಿವ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲ್, ಸಚಿವರು ಹೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ, ಈಗ ಸಿಎಂ ಕುರ್ಚಿ ಖಾಲಿಯಿಲ್ಲ, ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸೂಕ್ತ ಸಂದರ್ಭ ಬಂದಾಗ ದಲಿತರು ಸಿಎಂ ಆಗೋದ್ರಲ್ಲಿ ತಪ್ಪೇನಿದೆ? ದಲಿತ ಸಿಎಂ ಆಗಲು ನಿಶ್ಚಿತವಾಗಿ ನನ್ನ ಬೆಂಬಲವಿದೆ ಎಂದರು.

- Advertisement -

ನೀರಿನ ಸಮಸ್ಯೆಯಿಂದ ಐಟಿಬಿಟಿ ಕಂಪನಿಗಳು, ಕೈಗಾರಿಕೆಗಳು ರಾಜ್ಯಕ್ಕೆ ಬರಲು ಹಿಂಜರಿಯುತ್ತಿವೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ನೀರಿನ ಸಮಸ್ಯೆ ಎಲ್ಲೆಡೆ ಇದೆ. ಇಡೀ ವಿಶ್ವದಲ್ಲಿ ಬರಗಾಲವಿದೆ. ಬೆಂಗಳೂರು, ನಮ್ಮ ರಾಜ್ಯವಷ್ಟೆ ಅಲ್ಲ. ದೇಶದೆಲ್ಲೆಡೆ ಇದೆ. ನೀರಿನ ಸಮಸ್ಯೆಯನ್ನು ನಿಭಾಯಿಸುತ್ತೇವೆ. ಕೈಗಾರಿಕೆಗೆ ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.



Join Whatsapp