Home ಟಾಪ್ ಸುದ್ದಿಗಳು ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿವಾದ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿವಾದ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.


ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ ಎಲ್ಲಾ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಂತ ಪ್ರಿಂಟ್ ಮಿಸ್ಟೇಕ್ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು.

Join Whatsapp
Exit mobile version