January 25, 2021

ಪುತ್ತೂರಿನ ರಾಕೇಶ್ ಕೃಷ್ಣ, ಬೆಂಗಳೂರಿನ ವೀರ್ ಕಶ್ಯಪ್ ಸೇರಿ 32 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ

ರಾಕೇಶ್ ಕೃಷ್ಣ, ವೀರ್ ಕಶ್ಯಪ್

ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಸೇರಿದಂತೆ 32 ಮಕ್ಕಳು ಪ್ರಧಾನಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರಿನ ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಕರ್ನಾಟಕದಿಂದ ಆಯ್ಕೆಯಾಗಿರುವ ಇಬ್ಬರು ಬಾಲಕರು. ಇವರಿಬ್ಬರಿಗೂ ಆವಿಷ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಲಿದೆ.

32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗದಲ್ಲಿ 3 ಮತ್ತು ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕದಿಂದ ಆಯ್ಕೆಯಾಗಿರುವ ಮಕ್ಕಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ