ಚೆನ್ನೈ : ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುವುದಿಲ್ಲ” ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.
ಈ ವೇಳೆ ತಮ್ಮ ರಾಜ್ಯಕ್ಕಾಗಿ ಪ್ರತ್ಯೇಕ ಶಿಕ್ಷಣ ನೀತಿಯನ್ನು ರೂಪಿಸಲು ಒಂದು ತಜ್ಞರ ಸಮಿತಿಯನ್ನು ನೇಮಕ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. “ಇತ್ತೀಚೆಗೆ ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಪ್ರಾರಂಭಿಸಿದ ಮನೆಬಾಗಿಲಿಗೆ ಶಿಕ್ಷಣ ಒದಗಿಸುವ ಇಲ್ಲಂ ತೇಡಿ ಕಲ್ವಿ ಯೋಜನೆಯು ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಹಾಗೂ ಸಶಕ್ತಗೊಳಿಸಲು ನೆರವಾಗುತ್ತದೆ” ಎಂದು ಅವರು ಹೇಳಿರುವುದಾಗಿ ವರದಿ ತಿಳಿಸಿದೆ.