ನ್ಯಾಷನಲ್ ಹೆರಾಲ್ಡ್ ಪ್ರಕರಣ| ಸೋನಿಯಾ,ರಾಹುಲ್‌ಗೆ ಹೈಕೋರ್ಟ್ ನೋಟೀಸ್

Prasthutha|

- Advertisement -

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳ ವಿಚಾರಣೆ ಆರಂಭಿಸಬೇಕೆಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್‌ ಸ್ವಾಮಿ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ದೆಹಲಿ ಹೈಕೋರ್ಟ್‌, ಪ್ರಕರಣದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ ಮತ್ತು ಇತರರಿಗೆ ನೋಟೀಸ್ ಕಳುಹಿಸಿ ಪ್ರತಿಕ್ರಿಯೆ ಕೇಳಿದೆ.

ಈ ವಿಷಯಕ್ಕೆ ಸಂಬಂಧಿಸಿ ಸೋನಿಯಾ, ರಾಹುಲ್‌ ಸೇರಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್‌, ಸುಮನ್ ದುಬೆ, ಸ್ಯಾಮ್‌ ಪಿತ್ರೋಡ ಅವರಿಗೆ ನೋಟಿಸ್‌ ಜಾರಿ ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸುರೇಶ್‌ ಕೈಟ್‌ ಅವರು, ಏಪ್ರಿಲ್ 12ರೊಳಗೆ, ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ಬಗ್ಗೆ ತಮ್ಮ ನಿಲುವನ್ನು ತಿಳಿಸಬೇಕೆಂದು ತಿಳಿಸಿದ್ದಾರೆ.

- Advertisement -

‌ಸುಬ್ರಹ್ಮಣ್ಯನ್ ಸ್ವಾಮಿ ಪರವಾಗಿ ವಕೀಲ ಸತ್ಯ ಸಭರ್ವಾಲ್ ಮತ್ತು ಸೋನಿಯಾ, ರಾಹುಲ್ ಮತ್ತು ಇತರರ ಪರವಾಗಿ ವಕೀಲ ತರಣ್ ಚೀಮಾ ಹಾಜರಾಗಿದ್ದರು. ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್‌ ನೋಟಿಸ್‌ ನೀಡಿದ್ದು, ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ಏಪ್ರಿಲ್ 12 ರವರೆಗೆ ತಡೆಹಿಡಿದಿದೆ ಎಂದು ಖಚಿತಪಡಿಸಿದ್ದಾರೆ.

Join Whatsapp