ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾಲ್ಕನೇ ದಿನವೂ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ)ದ ತನಿಖೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ನಾಲ್ಕನೇ ದಿನವೂ ಹಾಜರಾಗಿದ್ದಾರೆ.

- Advertisement -

ಕೇರಳದ ವಯನಾಡಿನ ಲೋಕಸಭಾ ಸದಸ್ಯ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಬೆಳಿಗ್ಗೆ 11.10 ರ ಸುಮಾರಿಗೆ ಇಡಿ ಪ್ರಧಾನ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.

ಜೂನ್ 13 ರಿಂದ ಜೂನ್ 15 ರವರೆಗೆ ಸತತ ಮೂರು ದಿನಗಳ ಕಾಲ ರಾಹುಲ್ ಗಾಂಧಿ ಅವರನ್ನು ಇಡಿ 27 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಜೂನ್ 17ರಂದು ರಾಹುಲ್ ಗಾಂಧಿ ಅವರಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ತಮ್ಮ ತಾಯಿಯ ಅನಾರೋಗ್ಯದ ಕಾರಣವನ್ನು ಮುಂದಿಟ್ಟು ವಿಚಾರಣೆ ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿದ್ದರು . ರಾಹುಲ್ ಅವರ ವಿನಂತಿ ಒಪ್ಪಿಕೊಂಡಿದ್ದ ಜಾರಿ ನಿರ್ದೇಶನಾಲಯವು ವಿಚಾರಣೆಯನ್ನು ಸೋಮವಾರಕ್ಕೆ (ಜೂನ್ 20) ಮುಂದೂಡಿತ್ತು.

- Advertisement -

ತಮ್ಮ ನಾಯಕನ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆ ನಡೆಸಿದ್ದರು.

Join Whatsapp