ಮಳೆ ಅಬ್ಬರ: ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್

Prasthutha|

ಬೆಂಗಳೂರು: ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ.

- Advertisement -


ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಸಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದಿಷ್ಟೇ ಅಲ್ಲ, ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.


ಮಲೆನಾಡು ಭಾಗದಲ್ಲಿ ಇದುವರೆಗೆ 2000 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕರುಳಿದ್ದು, 200ಕ್ಕೂ ಹೆಚ್ಚು ಮನೆಗಳು ಕುಸಿದಿವೆ, ಸೇತುವೆ , ಕೃಷಿ, ತೋಟಗಾರಿಕೆ ಬೆಳೆ ಸೇರಿದಂತೆ ಅಂದಾಜು 120 ಕೋಟಿ ರೂ.ಗೂ ಹೆಚ್ಚಿನ ಹಾನಿ ಸಂಭವಿಸಿದೆ. ಮಳೆ ಹಾಗೂ ಗಾಳಿ ತೀವ್ರತೆಯ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯ ಮಲೆನಾಡು ಭಾಗದ 6 ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.



Join Whatsapp