ಬೆಂಗಳೂರು: ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಕೊನೆಯಾಗುತ್ತೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯುತ್ತೆ ಎಂದು ತಿಳಿಸಿದರು.