ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ನಿಧನ

Prasthutha|

ಭಟ್ಕಳ:  ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು.

ಭಟ್ಕಳ ಅತ್ಯುತ್ತಮ ಕಬಡ್ಡಿ ತಂಡಗಳಲ್ಲೊಂದಾಗಿರುವ ಪರಶುರಾಮ ಭಟ್ಕಳದ ಕೀ ಪ್ಲೇಯರ್ ಆಗಿದ್ದ ಮನೋಜ ನಾಯ್ಕ ತಂಡ ಹತ್ತು ಹಲವಾರು ಟೂರ್ನಿಗಳಲ್ಲಿ ಟ್ರೋಫಿ ಗೆಲ್ಲಲು ನೆರವಾಗಿದ್ದರು.

- Advertisement -

ಆಟದ ಜೊತೆ ಎದುರಾಳಿಯನ್ನು ಮಣಿಸುವ ತಂತ್ರಗಾರಿಕೆಯಲ್ಲಿಯೂ ಮನೋಜ ನಾಯ್ಕ ಮುಂಚೂಣಿಯಲ್ಲಿದ್ದರು. ತನ್ನ ಆಕ್ರಮಣಕಾರಿ ಆಟದ ಜೊತೆ ತಂಡವನ್ನೂ ಆಕ್ರಮಣಕಾರಿಯಾಗಿ ಮುನ್ನಡೆಸುತ್ತಿದ್ದರು

ನಾಯ್ಕ ಅಕಾಲಿಕ ಅಗಲಿಕೆ ಹಲವು ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

- Advertisement -