ರಾಷ್ಟ್ರಮಟ್ಟದ ಸ್ಕೇಟಿಂಗ್: ಮಂಗಳೂರಿನ ಆರ್ನಾ ರಾಜೇಶ್ ಗೆ ಎರಡು ಪದಕ

Prasthutha|

ಮಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 22ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59 ನೇ  ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

- Advertisement -

5 ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ತ್ರೀಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ‌ ಹಾಗೂ ಟುಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ‌

ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ‌ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ.ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು,ತರಬೇತುದಾರರಾದ ಮೋಹನ್ ದಾಸ್.ಕೆ, ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.

Join Whatsapp