ನವದೆಹಲಿ: ಭಾರತದಲ್ಲಿ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನ ಅಥವಾ ರಾಷ್ಟ್ರೀಯ ಖೇಲ್ ದಿವಸ್ ಅನ್ನು ಆಚರಿಸಲಾಗುತ್ತದೆ. 2012 ರಲ್ಲಿ ಈ ದಿನವನ್ನು ಮೊದಲ ಬಾರಿಗೆ ಭಾರತದ ರಾಷ್ಟ್ರೀಯ ಕ್ರೀಡಾ ದಿನವೆಂದು ಗೊತ್ತುಪಡಿಸಲಾಯಿತು ಮತ್ತು ಆಚರಿಸಲಾಯಿತು.
1905 ರಲ್ಲಿ ಇದೇ ದಿನಾಂಕದಂದು ಜನಿಸಿದ ಹಾಕಿ ದಂತಕತೆ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವಾರ್ಥವಾಗಿ ಆಗಸ್ಟ್ 29 ರಂದು ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ನಮ್ಮ ಕ್ರೀಡಾ ತಾರೆಯರನ್ನು ಗೌರವಿಸಲು ಬೇಕಾಗಿ ರಾಷ್ಟ್ರವು ಕ್ರೀಡಾ ದಿನವನ್ನು ಆಚರಿಸುತ್ತದೆ. ಈ ಸಂದರ್ಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ ಮತ್ತು ಧ್ಯಾನ್ ಚಂದ್ ಪ್ರಶಸ್ತಿಗಳಂತಹ ಕ್ರೀಡಾ ಪ್ರಶಸ್ತಿಗಳನ್ನು ರಾಷ್ಟ್ರಪತಿಗಳು ಪ್ರದಾನ ಮಾಡಲಾಗುತ್ತದೆ.
ವಿಶೇಷವೆಂದರೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದರು.