ಮಾ.28 ರಿಂದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ!

Prasthutha|

ನವದೆಹಲಿ: ಬ್ಯಾಂಕ್ ಒಕ್ಕೂಟಗಳು ಮಾರ್ಚ್ 28 ಮತ್ತು ಮಾರ್ಚ್ 29 ರಂದು (ಸೋಮವಾರ ಮತ್ತು ಮಂಗಳವಾರ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಅದಕ್ಕೂ ಮೊದಲು, ವಾರಾಂತ್ಯದಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಹೀಗಾಗಿ ಒಟ್ಟಾರೆ ನಾಲ್ಕು ದಿನಗಳ ಕಾಲ ಬ್ಯಾಂಕ್ ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದು ಬಂದಿದೆ.

- Advertisement -

ಮಾರ್ಚ್ ಕೊನೆಯ ವಾರದಲ್ಲಿ ಸತತ ನಾಲ್ಕು ದಿನಗಳವರೆಗೆ ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ವಿವಿಧ ನೌಕರರ ಸಂಘಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿವೆ. ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಈ ಮಾಹಿತಿಯನ್ನು ನೀಡಿದೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಬ್ಯಾಂಕ್ ಕಾನೂನು ತಿದ್ದುಪಡಿ ಮಸೂದೆ-2021 ವಿರೋಧಿಸಿ ಮಾರ್ಚ್ 28 ಮತ್ತು 29 ರಂದು ಬ್ಯಾಂಕ್ ಯೂನಿಯನ್ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ ಎಂದು ಭಾರತೀಯ ಬ್ಯಾಂಕ್‌ಗಳ ಸಂಘ (ಐಬಿಎ) ಅನ್ನು ಉಲ್ಲೇಖಿಸಿ ಎಸ್‌ಬಿಐ ತಿಳಿಸಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ) ರಾಷ್ಟ್ರವ್ಯಾಪಿ ಮುಷ್ಕರ ನಡೆಸುವ ನಿರ್ಧಾರದ ಬಗ್ಗೆ ನೋಟಿಸ್ ನೀಡಿವೆ.

Join Whatsapp