ಪಂಜಾಬ್: ಪಂಚರಾಜ್ಯ ಚುನಾವಣೆಯ ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋಲನುಭವಿಸಿದ್ದು ನೈತಿಕ ಹೊಣೆಹೊತ್ತು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಕ್ರಿಕೆಟರ್ ನವಜ್ಯೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.
ಇದಕ್ಕೂ ಇಂದು ಆರಂಭಿಕ ಟ್ರೆಂಡ್ ನಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿದ್ದಂತೆ ಚಂಡೀಗಢದ ತಮ್ಮ ನಿವಾಸದಲ್ಲಿ ಸಿಎಂ ಚರಣಜೀತ್ ಸಿಂಗ್ ಚನ್ನಿ ಅವರು ರಾಜೀನಾಮೆ ನೀಡುವ ಬಗ್ಗೆ ತಮ್ಮ ಆಪ್ತರಲ್ಲಿ ಸಮಾಲೋಚನೆ ನಡೆಸಿದ್ದರು. ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಚರಣ್ ಜೀತ್ ಸಿಂಗ್ ಅಲ್ಲದೆ, ಮಾಜಿ ಸಿ ಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ನವಜ್ಯೋತ್ ಸಿಂಗ್ ಸೇರಿದಂತೆ ಘಟಾನುಘಟಿಗಳು ಈ ಬಾರಿ ಚುನಾವಣೆಯಲ್ಲಿ ಭಾರಿ ಮುಖಭಂಗ ಆನುಭವಿಸಿದ್ದಾರೆ.ಪಂಜಾಬ್ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ.