ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧಭೂಮಿಯಲ್ಲಿ ಮೃತಪಟ್ಟ ನವೀನ್ ಮೃತದೇಹ ಸಿಕ್ಕಿದೆ. ಮೃತ ದೇಹವನ್ನು ಉಕ್ರೇನಿನ ಶವಾಗಾರದಲ್ಲಿ ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಜೈಶಂಕರ್ ಅವರ ಜೊತೆ ಮಾತಾಡಿದ್ದೇನೆ. ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸ್ತಿದ್ದೇವೆ ಎಂದು ಹೇಳಿದ್ದಾರೆ.