ನವೀನ್ ಮೃತದೇಹವನ್ನು ತಾಯ್ನಾಡಿಗೆ ತರುವುದು ಸರ್ಕಾರದ ಮೊದಲ ಆದ್ಯತೆ: ಬೊಮ್ಮಾಯಿ

Prasthutha|

ಬೆಂಗಳೂರು: ಉಕ್ರೇನ್ ಸಾವನ್ನಪ್ಪಿದ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ನವೀನ್ ಕುಟುಂಬಕ್ಕೆ ಎಲ್ಲ ಸಹಾಯ, ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಕ್ರೇನ್ ನಲ್ಲಿರುವ ಭಾರತೀಯರನ್ನು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡುವ ಕಾರ್ಯ ಭರದಿಂದ ಸಾಗುತ್ತಿದೆ. ಸುಮಾರು 26 ವಿಮಾನಗಳು ಮುಂದಿನ ಎರಡು ಮೂರು ದಿನಗಳಲ್ಲಿ ಕರೆತರುವ ಪ್ರಯತ್ನವಾಗುತ್ತಿದ್ದು, ಆದಷ್ಟು ಕನ್ನಡಿಗರನ್ನು ಕರೆತರುವ ಪ್ರಯತ್ನವನ್ನು ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ಮಾಡಲಿದೆ ಎಂದರು.

ವೈದ್ಯಕೀಯ ವಿದ್ಯಾರ್ಥಿ ನವೀನ್ ಜ್ಞಾನ ಗೌಡರ್ ಮೃತದೇಹದ ಫೋಟೋಗಳು ಬಂದಿವೆ. ಅವರ ಸ್ನೇಹಿತರು ಕಳುಹಿಸಿಕೊಟ್ಟಿದ್ದಾರೆ. ಅವರ ಜೊತೆಗಿದ್ದವರು ಶೆಲ್ ದಾಳಿ ನಿಂತ ಮೇಲೆ ಫೋಟೋ ತೆಗೆದು ಕಳುಹಿಸಿಕೊಟ್ಟಿದ್ದಾರೆ. ವಿದೇಶಾಂಗ ಸಚಿವಾಲಯ ಮತ್ತು ವಿದೇಶಾಂಗ ಸಚಿವರ ಜೊತೆ ಮಾತನಾಡಿ, ಭಾರತೀಯ ರಾಯಭಾರಿ ಜೊತೆ ಮಾತನಾಡಿ ಮೃತದೇಹವನ್ನು ತರುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Join Whatsapp