ಚಂಡೀಗಡ: ಪಂಜಾಬ್ ಕಾಂಗ್ರೆಸ್ ನ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಧು ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹದ ಬೆದರಿಕೆ ಹಾಕಿದ್ದಾರೆ.
ಸರ್ಕಾರವು ಡ್ರಗ್ಸ್ ದಂಧೆ ಮತ್ತು ಹತ್ಯೆಗಳ ಕುರಿತಾದ ವರದಿಗಳನ್ನು ಬಹಿರಂಗಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಿಧು ತಿಳಿಸಿದ್ದಾರೆ.
ಡ್ರಗ್ಸ್ ದಂಧೆಯ ಕುರಿತಾದ ವರದಿಗಳನ್ನು ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದೆ. ಪಂಜಾಬ್ ಸರ್ಕಾರವು ಈ ವರದಿಗಳನ್ನು ಜನರೊಂದಿಗೆ ಹಂಚಿಕೊಳ್ಳಬೇಕು. ಡ್ರಗ್ಸ್ ದಂಧೆಯನ್ನು ನಿರ್ಮೂಲನೆ ಮಾಡುವ ಭರವಸೆ ನೀಡಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಿದೆ. ಆದ್ದರಿಂದ ವರದಿಗಳನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಸಿಧು ಒತ್ತಾಯಿಸಿದ್ದಾರೆ.
ಒಂದು ವೇಳೆ ಸರ್ಕಾರವು ತಮ್ಮ ಮನವಿಗೆ ಸ್ಪಂದಿಸದೇ ಹೋದಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕೂರುವುದಾಗಿ ಅವರು ಬೆದರಿಕೆ ಹಾಕಿದ್ದಾರೆ.