ಪಂಜಾಬ್: ಪಂಚ ರಾಜ್ಯಗಳ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಲ್ಲಾ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವುದರ ನಡುವೆ ಪಂಜಾಬ್’ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತನ್ನ ಆಂತರಿಕ ಜಗಳವನ್ನು ನಿಯಂತ್ರಿಸುವುದೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹಾಗೂ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಇದೀಗ ಪಕ್ಷದ ‘ಹೈ ಕಮಾಂಡ್’ ಎದುರೇ ಬಟಾಬಯಲಾಗಿದೆ. ಪಂಜಾಬ್’ನ ಧುರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಭಾಗವಹಿಸಿದ್ದ ಪ್ರಚಾರ ಸಭೆಯಲ್ಲಿ ಹೈಡ್ರಾಮ ನಡೆದಿದ್ದು, ನಾಯಕರು ಹಾಗೂ ಕಾರ್ಯಕರ್ತರಿಗೆ ಇರಿಸು ಮುರಿಸು ಉಂಟಾಗಿದೆ.
ಧುರಿ ವಿಧಾನಸಭಾ ಕ್ಷೇತ್ರದ ರಾಜೋಮಜ್ರಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಯೋಜಕರು ಸಿಧುವನ್ನು ಆಹ್ವಾನಿಸಿದ್ದು, ಈ ವೇಳೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಪಕ್ಕದಲ್ಲಿ ಕುಳಿತಿದ್ದ ಸಿದ್ದು ಎದ್ದು ನಿಂತು ಕೈ ಸನ್ನೆ ಮೂಲಕ ಮಾತನಾಡಲು ನಿರಾಕರಿಸಿದ್ದಾರೆ. ಅಲ್ಲದೆ ಚನ್ನಿಯತ್ತ ಕೈ ತೋರಿಸಿ ಮುಂದಿನ ಭಾಷಣಕಾರರಾಗಿ ಚನ್ನಿಯನ್ನು ಆಹ್ವಾನಿಸುವಂತೆ ಸೂಚನೆ ನೀಡಿದರು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿದೆ.
ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಂಜಾಬ್ ವಿಧಾನಸಭಾ ಚುನಾವಣೆಗೆ ಚನ್ನಿ ಅವರನ್ನು ತಮ್ಮ ಪಕ್ಷದ ಮುಖ್ಯಮಂತ್ರಿ ಮುಖ ಎಂದು ಘೋಷಿಸಿದ್ದರು. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸಿಧು, ರಾಹುಲ್ ಗಾಂಧಿ ನಿರ್ಧಾರವನ್ನು ಸ್ವಾಗತಿಸಿದ್ದರು. ಪಕ್ದ ನಿರ್ಧಾರದಿಂದ ನನಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದರು.