ಚಂಡೀಗಡ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿದು ರಾಜೀನಾಮೆ ನೀಡಿದ್ದಾರೆ.
“ಪಂಜಾಬ್ ನ ಭವಿಷ್ಯ ಮತ್ತು ಪಂಜಾಬ್ ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ” ಎಂದು ರಾಜೀನಾಮೆಯಲ್ಲಿ ಸಿದು ತಿಳಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.