ವಯನಾಡಿ​​ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

Prasthutha|

- Advertisement -

ನವದೆಹಲಿ: ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದೆಯೇ ಘೋಷಿಸಲಾಗಿತ್ತು. ಆದರೆ, ಅವರ ಎದುರಾಳಿಯಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಬಿಜೆಪಿ ತೆರೆ ಎಳೆದಿದೆ.

ಬಿಜೆಪಿ ಕೂಡ ಪ್ರಿಯಾಂಕಾ ವಿರುದ್ಧ ಮಹಿಳಾ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ.

- Advertisement -

ವಯನಾಡಿನ ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.

ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.

ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ನವ್ಯಾ ಅವರು 2007ರಲ್ಲಿ ಬಿ.ಟೆಕ್ ಅನ್ನು ಪೂರ್ಣಗೊಳಿಸಿದ್ದಾರೆ. ಅವರ ಸಾಮಾಜಿಕ ಮಾಧ್ಯಮದ ಪ್ರೊಫೈಲ್ ಪ್ರಕಾರ, ಅವರು ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಕೌನ್ಸಿಲರ್ ಆಗಿದ್ದಾರೆ. ಹಾಗೇ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.



Join Whatsapp