ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಬಂಧಿತರಾಗಿರುವ ಸಚಿವ, ಎನ್.ಸಿ.ಪಿ ಮುಖಂಡ ನವಾಬ್ ಮಲಿಕ್ ಅವರನ್ನು ಮಾರ್ಚ್ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಆದೇಶಿಸಿದೆ.
ದಾವೂದ್ ಇಬ್ರಾಹಿಮ್ ಮತ್ತು ಆತನ ಸಹಚರರೊಂದಿಗೆ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 23 ರಂದು ಇಡಿ ಅಧಿಕಾರಿಗಳು ನವಾಬ್ ಮಲಿಕ್ ಅವರನ್ನು ಬಂಧಿಸಿದ್ದರು.
ಈ ಮಧ್ಯೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ತನ್ನನ್ನು ಕಾನೂನುಬಾಹಿರವಾಗಿ ಬಂಧಿಸಿದ್ದು, ತಕ್ಷಣ ಬಿಡುಗಡೆಗೊಳಿಸುವಂತೆ ಮನವಿ ಮಾಡಿ ನವಾಬ್ ಮಲಿಕ್ ಅವರು ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.